Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:19 - ಕನ್ನಡ ಸತ್ಯವೇದವು C.L. Bible (BSI)

19 :ಒಡೆಯರು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಒಡೆಯರು ಜೆರುಸಲೇಮನ್ನು ಬಿಟ್ಟುಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವರು ನೆನಸದಿರಲಿ, ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವನು ನೆನಸದಿರಲಿ, ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:19
17 ತಿಳಿವುಗಳ ಹೋಲಿಕೆ  

ನಾನು ಅವರ ಪರವಾಗಿ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೇ? ಇಲ್ಲವೇ ಇಲ್ಲ, ಅರಸರು ತಮ್ಮ ಸೇವಕನಾದ ನನ್ನ ಮೇಲೆ ಹಾಗು ನನ್ನ ಮನೆಯವರ ಮೇಲೆ ಇಂಥ ಅಪವಾದವನ್ನು ಹೊರಿಸಬಾರದು. ಈ ವಿಷಯದಲ್ಲಿ ತಮ್ಮ ಸೇವಕನಾದ ನನಗೆ ಸ್ವಲ್ಪವೂ ಗೊತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II


ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II


ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸರು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ,” ಎಂದು ಹೇಳಿ ಸಂತೈಸಿದನು.


ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣ ಅಮ್ನೋನನು ನಿನ್ನ ಮಾನಭಂಗ ಮಾಡಿದನೇ? ನನ್ನ ತಂಗೀ, ತಕ್ಷಣಕ್ಕೆ ಸುಮ್ಮನಿರು; ಅವನು ನಿನ್ನ ಅಣ್ಣನಲ್ಲವೇ? ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ,” ಎಂದು ಹೇಳಿದನು. ತಾಮಾರಳು ಒಂಟಿಗಳಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಿಸಿದಳು.


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ.


ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಜೋರ್ಡನ್ ನದಿಯಲ್ಲಿಳಿದು ಅರಸನ ಮನೆಯವರನ್ನು ದಾಟಿಸುವುದಕ್ಕೂ ಅವರಿಗೆ ಬೇಕಾದ ಸಹಾಯಮಾಡುವುದಕ್ಕೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಜೋರ್ಡನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು