Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:21 - ಕನ್ನಡ ಸತ್ಯವೇದವು C.L. Bible (BSI)

21 ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಚೆರೂಯಳ ಮಗನಾದ ಅಬೀಷೈಯು - ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಚೆರೂಯಳ ಮಗನಾದ ಅಬೀಷೈಯನು, “ಯೆಹೋವನಿಂದ ಆರಿಸಲ್ಪಟ್ಟ ರಾಜನಿಗೆ ಕೆಟ್ಟದ್ದು ಸಂಭವಿಸಲಿ ಎಂದು ಶಿಮ್ಮಿಯು ಅಪೇಕ್ಷಿಸಿದ್ದರಿಂದ ಮರಣ ಶಿಕ್ಷೆಗೆ ಗುರಿಯಾಗಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:21
10 ತಿಳಿವುಗಳ ಹೋಲಿಕೆ  

“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.


ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.


ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.


ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು