2 ಸಮುಯೇಲ 19:26 - ಕನ್ನಡ ಸತ್ಯವೇದವು C.L. Bible (BSI)26 ಅವನು, “ಒಡೆಯರೇ, ಅರಸರೇ, ನನ್ನ ಸೇವಕ ನನ್ನನ್ನು ವಂಚಿಸಿದ. ಕುಂಟನಾದ ನಾನು ಅವನಿಗೆ, ‘ಕತ್ತೆಗೆ ತಡಿಹಾಕು, ನಾನು ಕುಳಿತುಕೊಂಡು ಅರಸರ ಜೊತೆಯಲ್ಲೇ ಹೋಗಬೇಕು’ ಎಂದು ಆಜ್ಞಾಪಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು - ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ - ಕತ್ತೆಗೆ ತಡಿಹಾಕು, ನಾನು ಕೂತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು ಎಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಮೆಫೀಬೋಶೆತನು, “ರಾಜನಾದ ನನ್ನ ಒಡೆಯನೇ, ನನ್ನ ಸೇವಕನಾದ ಚೀಬನು ನನಗೆ ಮೋಸಮಾಡಿದನು. ನಾನು ಚೀಬನಿಗೆ, ‘ನಾನು ಕುಂಟನಾಗಿರುವದರಿಂದ ತಡಿಯೊಂದನ್ನು ಹೇಸರಕತ್ತೆಯ ಮೇಲೆ ಹಾಕು. ನಾನು ಹೇಸರಕತ್ತೆಯ ಮೇಲೆ ಕುಳಿತು, ರಾಜನೊಂದಿಗೆ ಹೋಗುತ್ತೇನೆ’ ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು. ಅಧ್ಯಾಯವನ್ನು ನೋಡಿ |