Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:29 - ಕನ್ನಡ ಸತ್ಯವೇದವು C.L. Bible (BSI)

29 ಆಗ ಅರಸನು, “ಹೆಚ್ಚು ಮಾತು ಏಕೆ? ಹೊಲವನ್ನು ನೀನು ಹಾಗು ಚೀಬ ಭಾಗಮಾಡಿಕೊಳ್ಳಬೇಕು. ಇದೇ ನನ್ನ ತೀರ್ಪು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅರಸನು ಅವನಿಗೆ - ಹೆಚ್ಚು ಮಾತು ಯಾಕೆ? ನೀನೂ ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬದೇ ನನ್ನ ತೀರ್ಪು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜನು ಮೆಫೀಬೋಶೆತನಿಗೆ, “ನಿನ್ನ ಸಮಸ್ಯೆಗಳ ಬಗ್ಗೆ ಹೆಚ್ಚಿಗೆ ಏನನ್ನೂ ಹೇಳಬೇಡ. ನಾನು ಈ ರೀತಿ ತೀರ್ಮಾನಿಸಿದ್ದೇನೆ. ನೀನು ಮತ್ತು ಚೀಬನು ಭೂಮಿಯನ್ನು ಹಂಚಿಕೊಳ್ಳಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:29
11 ತಿಳಿವುಗಳ ಹೋಲಿಕೆ  

ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ


ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


“ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II


ಸೌಲನ ಮನೆಯಲ್ಲಿ ಊಳಿಗನಾಗಿದ್ದ ಚೀಬ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?’ ಎಂದು ಕೇಳಲು ಅವನು, “ನಿಮ್ಮ ಊಳಿಗನಾದ ನಾನು ಚೀಬನೇ,” ಎಂದು ಉತ್ತರಕೊಟ್ಟನು.


ಅನಂತರ ದಾವೀದನು ಸೌಲನ ಸೇವಕ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನ ಸೌಲನಿಗೂ ಅವನ ಕುಟುಂಬದವರಿಗೂ ಇದ್ದುದ್ದನ್ನೆಲ್ಲಾ ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.


ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ; ನನ್ನ ಒಡೆಯರಾದ ಅರಸರು ತಮ್ಮ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು,” ಎಂದನು.


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು