Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:33 - ಕನ್ನಡ ಸತ್ಯವೇದವು C.L. Bible (BSI)

33 ಅರಸನು ಆ ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ; ನಾನು ಜೆರುಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಾಕುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅರಸನು ಬರ್ಜಿಲ್ಲೈಗೆ - ನನ್ನ ಜೊತೆಯಲ್ಲಿ ಹೊಳೆಯ ಆಚೆಗೆ ಬಾ; ನಾನು ಯೆರೂಸಲೇವಿುನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ದಾವೀದನು ಬರ್ಜಿಲ್ಲೈಯನಿಗೆ, “ನದಿಯನ್ನು ದಾಟಿ ನನ್ನೊಂದಿಗೆ ಆಚೇದಡಕ್ಕೆ ಬಾ. ನೀನು ಜೆರುಸಲೇಮಿನಲ್ಲಿ ನನ್ನೊಂದಿಗೆ ವಾಸಿಸುವುದಾದರೆ, ನಾನು ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:33
7 ತಿಳಿವುಗಳ ಹೋಲಿಕೆ  

ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.


ಚೀಬನು ಅರಸನಿಗೆ, “ಒಡೆಯರಾದ ಅರಸರ ಅಪ್ಪಣೆ ಮೇರೆಗೆ ಸೇವಕನು ನಡೆಯುವನು,” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.


ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.


ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸರ ಸಂಗಡ ಜೆರುಸಲೇಮಿಗೆ ಬರುವುದು ಹೇಗೆ?


ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು