Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:38 - ಕನ್ನಡ ಸತ್ಯವೇದವು C.L. Bible (BSI)

38 ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ಅವನಿಗೆ ನಿನ್ನ ಇಷ್ಟದಂತೆ ದಯೆತೋರುತ್ತೇನೆ. ಇನ್ನೂ ಏನೇನು ಮಾಡಬೇಕೆನ್ನುತ್ತೀಯೋ ಅದೆಲ್ಲವನ್ನು ಮಾಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅದಕ್ಕೆ ಅರಸನು - ಕಿಮ್ಹಾಮನು ನನ್ನ ಸಂಗಡ ಬರಲಿ; ಅವನಿಗೆ ನಿನ್ನ ಇಷ್ಟದಂತೆ ದಯೆ ತೋರಿಸುವೆನು. ಇನ್ನೂ ಏನೇನು ಮಾಡಬೇಕನ್ನುತ್ತೀಯೋ ಅದೆಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ರಾಜನು, “ಕಿಮ್ಹಾಮನು ನನ್ನೊಂದಿಗೆ ಬರಲಿ. ನಾನು ನಿನಗೋಸ್ಕರ ಅವನಿಗೆ ದಯೆತೋರಿಸುವೆನು. ಅವನಿಗಾಗಿ ನೀನು ಏನು ಮಾಡಬೇಕೆಂದು ಬಯಸುತ್ತೀಯೋ ಅದನ್ನೆಲ್ಲಾ ಮಾಡುತ್ತೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:38
4 ತಿಳಿವುಗಳ ಹೋಲಿಕೆ  

ದಯವಿಟ್ಟು ನಿಮ್ಮ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ, ಇಲ್ಲಿ ನಿಮ್ಮ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯರಾದ ಅರಸರು ಇವನನ್ನು ಕರೆದುಕೊಂಡು ಹೋಗಿ ತಮ್ಮ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಿ,” ಎಂದನು.


ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.


ಬಾಬಿಲೋನಿಯರ ಭಯದಿಂದ ಈಜಿಪ್ಟಿಗೆ ವಲಸೆಹೋಗಬೇಕೆಂದು ಬೆತ್ಲೆಹೇಮಿನ ಸಮೀಪದಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.


“ಆದರೆ ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡು; ಅವರು ದಿನನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಏಕೆಂದರೆ ನಾನು ನಿನ್ನ ಸಹೋದರ ಅಬ್ಷಾಲೋಮನಿಂದ ತಪ್ಪಿಸಿಕೊಂಡು ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು