Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:40 - ಕನ್ನಡ ಸತ್ಯವೇದವು C.L. Bible (BSI)

40 ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲ ಯೆಹೂದ್ಯರು ಹಾಗು ಇಸ್ರಯೇಲರಲ್ಲಿ ಅರ್ಧಜನರು ಅರಸನನ್ನು ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ ಇಸ್ರಾಯೇಲ್ಯರಲ್ಲಿ ಅರ್ಧಜನರೂ ಅರಸನನ್ನು ಕರಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ರಾಜನು ಜೋರ್ಡನ್ ನದಿಯನ್ನು ದಾಟಿ ಗಿಲ್ಗಾಲಿಗೆ ಹೋದನು. ಕಿಮ್ಹಾಮನು ಅವನೊಂದಿಗೆ ಹೋದನು. ಯೆಹೂದ ದೇಶದ ಜನರೆಲ್ಲರು ಮತ್ತು ಇಸ್ರೇಲಿನ ಅರ್ಧದಷ್ಟು ಜನರು ದಾವೀದನನ್ನು ನದಿ ದಾಟಿಸಿ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:40
6 ತಿಳಿವುಗಳ ಹೋಲಿಕೆ  

ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.


ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು.


ದಯವಿಟ್ಟು ನಿಮ್ಮ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ, ಇಲ್ಲಿ ನಿಮ್ಮ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯರಾದ ಅರಸರು ಇವನನ್ನು ಕರೆದುಕೊಂಡು ಹೋಗಿ ತಮ್ಮ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು