Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:9 - ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಾಯೆಲ್‍ಕುಲಗಳಲ್ಲೆಲ್ಲಾ ಜನರು ತಮ್ಮ ತಮ್ಮೊಳಗೆ ಜಗಳವಾಡಿ - ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲಿನ ಕುಲಗಳ ಜನರೆಲ್ಲರೂ ತಮ್ಮಲ್ಲೇ ಚರ್ಚಿಸಿದರು. ಅವರು, “ರಾಜನಾದ ದಾವೀದನು ಫಿಲಿಷ್ಟಿಯರಿಂದ ಮತ್ತು ಇತರ ಶತ್ರುಗಳಿಂದ ನಮ್ಮನ್ನು ರಕ್ಷಿಸಿದನು. ಅಬ್ಷಾಲೋಮನಿಂದಾಗಿ ದಾವೀದನು ಓಡಿಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:9
15 ತಿಳಿವುಗಳ ಹೋಲಿಕೆ  

ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು.


ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.


ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)


ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು.


ಅದಕ್ಕೆ ನಾನು, “ಯಾರಲ್ಲಿ ಚಿನ್ನದ ಒಡವೆ ಇದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು,” ಎಂದೆ. ಅವರು ಹಾಗೆಯೇ ಕೊಟ್ಟರು. ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರು ಹೊರಗೆ ಬಂತು,” ಎಂದನು.


ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು.


ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲ ಯೆಹೂದ್ಯರು ಹಾಗು ಇಸ್ರಯೇಲರಲ್ಲಿ ಅರ್ಧಜನರು ಅರಸನನ್ನು ಕರೆದುಕೊಂಡು ಹೋದರು.


ನನ್ನ ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ ನಾನರಿಯದ ಜನರನ್ನೂ ನನಗಧೀನರನ್ನಾಗಿಸಿದೆ.


ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು