Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:13 - ಕನ್ನಡ ಸತ್ಯವೇದವು C.L. Bible (BSI)

13 ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ ಇವರು ಕೆರೆಯ ಈಚೆಯಲ್ಲಿಯೂ ಅವರು ಆಚೆಯಲ್ಲಿಯೂ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:13
13 ತಿಳಿವುಗಳ ಹೋಲಿಕೆ  

ಅವನ ಇಬ್ಬರು ಹೆಣ್ಣು ಮಕ್ಕಳು: ಚೆರೂಯ ಹಾಗೂ ಅಬೀಗೈಲ ಎಂಬವರು. ಜೆಸ್ಸೆಯ ಮಗಳು ಚೆರೂಯಳಿಗೆ ಅಬೈ , ಯೋವಾಬ್ , ಅಸಾಹೇಲ್ ಎಂಬ ಮೂರು ಜನ ಮಕ್ಕಳಿದ್ದರು .


ಚೆರೂಯಳ ಮಗ ಯೋವಾಬನು ಅವನ ಸೇನಾಪತಿ ಆಗಿದ್ದನು. ಅಹೀಲೂದನ ಮಗ ಯೆಹೋಷಾಫಟನು ಅವನ ಮಂತ್ರಿ ಆಗಿದ್ದನು.


ತಮ್ಮ ಸೈನಿಕರನ್ನೆಲ್ಲ ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಹಿಡಿದರು.


‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು.


ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು.


ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವರೆದುರಿಗೆ ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನು ಅವನನ್ನು ವಂದಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ್ದ ಕತ್ತಿ ಒರೆಯಿಂದ ಕೆಳಗೆ ಬಿದ್ದಿತು.


“ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.


ಆ ಮೂವತ್ತು ಮಂದಿ ರಣವೀರರ ಪಟ್ಟಿ ಇದು: ಯೋವಾಬನ ತಮ್ಮನಾದ ಅಸಾಹೇಲನು, ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನನು.


ಯೋವಾಬನ ತಮ್ಮನಾದ ಅಸಾಹೇಲನೂ ಅವನು ಸತ್ತನಂತರ ಅವನ ಮಗ ಜೆಬದ್ಯನೂ ನಾಲ್ಕನೆಯ ವರ್ಗದ ನಾಯಕರು; ನಾಲ್ಕನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವರ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು