2 ಸಮುಯೇಲ 2:22 - ಕನ್ನಡ ಸತ್ಯವೇದವು C.L. Bible (BSI)22 ಮತ್ತೊಮ್ಮೆ ಅಬ್ನೇರನು, “ನನ್ನನ್ನು ಬಿಟ್ಟುಹೋಗು; ನಿನ್ನನ್ನು ಕೊಲ್ಲಲು ನನ್ನನ್ನೇಕೆ ಒತ್ತಾಯಿಸುವೆ? ಹಾಗೆ ಕೊಂದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ತಾನೆ ಮುಖ ತೋರಿಸಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಬ್ನೇರನು ತಿರುಗಿ ಅಸಾಹೇಲನಿಗೆ, “ನನ್ನನ್ನು ಬಿಟ್ಟು ಹೋಗು, ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಬ್ನೇರನು ತಿರಿಗಿ - ನನ್ನನ್ನು ಬಿಟ್ಟುಹೋಗು; ನಾನೇಕೆ ನಿನ್ನನ್ನು ನೆಲಕ್ಕುರುಳಿಸಬೇಕು? ಹಾಗೆ ಮಾಡಿದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮೋರೆತೋರಿಸಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಬ್ನೇರನು ಮತ್ತೆ ಅಸಾಹೇಲನಿಗೆ, “ನನ್ನನ್ನು ಅಟ್ಟಿಸಿಕೊಂಡು ಬರಬೇಡ; ಇಲ್ಲವಾದರೆ ನಾನು ನಿನ್ನನ್ನು ಕೊಲ್ಲುತ್ತೇನೆ. ನಾನು ನಿನ್ನನ್ನು ಕೊಂದುಬಿಟ್ಟರೆ, ನಿನ್ನ ಸೋದರನಾದ ಯೋವಾಬನ ಮುಖವನ್ನು ನಾನು ಮತ್ತೆ ನೋಡಲಾಗುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅಬ್ನೇರನು ಅಸಾಯೇಲನಿಗೆ, “ನನ್ನನ್ನು ಬೆನ್ನಟ್ಟುವುದನ್ನು ಬಿಟ್ಟುಬಿಡು, ನಾನು ಏಕೆ ನಿನ್ನನ್ನು ನೆಲಕ್ಕೆ ಹೊಡೆದು ಕೆಡವಿಬಿಡಬೇಕು? ನಾನು ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ?” ಎಂದನು. ಅಧ್ಯಾಯವನ್ನು ನೋಡಿ |