Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:27 - ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ, ಜನರು ನಾಳೆ ಬೆಳಗಾಗುವವರೆಗೆ ತಮ್ಮ ದೇಶಬಾಂಧವರನ್ನು ಹಿಂದಟ್ಟದೆ ಬಿಡುತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುವುದಿಲ್ಲ” ಎಂದು ಉತ್ತರಕೊಟ್ಟು ಕೂಡಲೇ ತುತ್ತೂರಿಯನ್ನು ಊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ಯೋವಾಬನು - ದೇವರ ಜೀವದಾಣೆ ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ ಜನರು ನಾಳೆ ಬೆಳಗಾಗುವವರೆಗೆ ತಮ್ಮ ಬಂಧುಗಳನ್ನು ಹಿಂದಟ್ಟದೆ ಬಿಡುತ್ತಿದ್ದಿಲ್ಲ ಎಂದು ಉತ್ತರಕೊಟ್ಟು ಕೂಡಲೆ ತುತೂರಿಯನ್ನು ಊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಯೋವಾಬನು, “ನೀನು ಒಳ್ಳೆಯ ಮಾತನ್ನೇ ಆಡಿರುವೆ. ನೀನು ಹೀಗೆ ಹೇಳದೆ ಇದ್ದಿದ್ದರೆ, ಯೆಹೋವನಾಣೆಗೂ ಜನರು ನಾಳೆ ಮುಂಜಾನೆವರೆಗೂ ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುತ್ತಿದ್ದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದಕ್ಕೆ ಯೋವಾಬನು, “ದೇವರ ಜೀವದಾಣೆ, ನೀನು ಮಾತನಾಡದೆ ಹೋದರೆ, ನಿಶ್ಚಯವಾಗಿ ಪ್ರತಿ ಮನುಷ್ಯನು ಉದಯದವರೆಗೆ ತನ್ನ ಸಹೋದರನನ್ನು ಹಿಂದಟ್ಟಿ ಹೋಗುತ್ತಿದ್ದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:27
11 ತಿಳಿವುಗಳ ಹೋಲಿಕೆ  

ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು.


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!


ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.


ಕೂಡಲೆ ತುತೂರಿಯನ್ನು ಊದಿಸಿದನು. ಆಗ ಜನರು ಇಸ್ರಯೆಲರನ್ನು ಹಿಂದಟ್ಟದೆ ಬಿಟ್ಟರು. ಯುದ್ಧವು ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು