Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:32 - ಕನ್ನಡ ಸತ್ಯವೇದವು C.L. Bible (BSI)

32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇವಿುನಲ್ಲಿರುವ ಅವನ ತಂದೆಯ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದಾವೀದನ ಭಟರು ಅಸಾಹೇಲನ ಶವವನ್ನು ಬೆತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಅಸಾಯೇಲನನ್ನು ಎತ್ತಿಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:32
10 ತಿಳಿವುಗಳ ಹೋಲಿಕೆ  

ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿದ್ದ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿಹೊಂದಿದ ಮೇಲೆ, ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.


ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.


ಅನಂತರ ಇಸ್ರಯೇಲರ ಎಲ್ಲ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನಾವು ನಿಮ್ಮ ರಕ್ತಸಂಬಂಧಿಗಳು;


ಸೌಲನು ಅವನನ್ನು, “ತರುಣನೇ, ನೀನು ಯಾರ ಮಗ?” ಎಂದು ಕೇಳಿದನು. ಅದಕ್ಕೆ ಅವನು, “ನಾನು ಬೆತ್ಲೆಹೇಮಿನವನೂ ನಿಮ್ಮ ಸೇವಕನೂ ಆದ ಜೆಸ್ಸೆಯನ ಮಗ,” ಎಂದು ಉತ್ತರಿಸಿದನು.


ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು" ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ಯೋವಾಷನ ಮಗನಾದ ಗಿದ್ಯೋನನು ಹಣ್ಣು ಹಣ್ಣು ಮುದುಕನಾಗಿ ಮರಣಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿ ಅವನ ತಂದೆ ಆದ ಯೋವಾಷನದಾಗಿತ್ತು.


ಆದರೆ ದಾವೀದನ ಯೋಧರು ಅಬ್ನೇರನ ಜನರಾದ ಬೆನ್ಯಾಮೀನ್ಯರಲ್ಲಿ ಮುನ್ನೂರರ್ವತ್ತು ಮಂದಿಯನ್ನು ಕೊಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು