Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ - ನೀವು ಕರುಣೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಅಶೀರ್ವಾದವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:5
16 ತಿಳಿವುಗಳ ಹೋಲಿಕೆ  

ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರಪಟ್ಟದ್ದರಿಂದ ಸರ್ವೇಶ್ವರನ ಆಶೀರ್ವಾದ ನಿಮ್ಮ ಮೇಲಿರಲಿ!


ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.


ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.


ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.


ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ.


ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಸಭೆ ಸೇರಿದ್ದಾಗ ಅದಕ್ಕೆ ಬಾರದಿದ್ದ ಇಸ್ರಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ, ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.


ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.


ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದೊಳಗೆ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ,” ಎಂದು ಹೇಳಿ ಅವರನ್ನು ಕಳುಹಿಸಲಾಯಿತು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.


ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು