Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:9 - ಕನ್ನಡ ಸತ್ಯವೇದವು C.L. Bible (BSI)

9 ಗಿಲ್ಯಾದ್, ಆಶೇರ್, ಜೆಸ್ರೀಲ್, ಎಫ್ರಯಿಮ್, ಬೆನ್ಯಾಮೀನ್ ಇವುಗಳ ಜನರ ಮೇಲೆ ಮತ್ತು ಬೇರೆ ಎಲ್ಲ ಇಸ್ರಯೇಲರ ಮೇಲೆ ಅವನನ್ನು ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್, ಬೆನ್ಯಾಮೀನ್ ಇವುಗಳ ಜನರ ಮೇಲೆಯೂ ಬೇರೆ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:9
19 ತಿಳಿವುಗಳ ಹೋಲಿಕೆ  

ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣ ನನಗೆ I ಜೂದಕುಲ ರಾಜದಂಡವಾಗಿದೆ ನನ್ನ ಕೈಗೆ II


ಅವರು ಆ ದೇಶದ ಕಾನಾನ್ಯರನ್ನು ಹೊರಡಿಸದೆ ಅವರ ಮಧ್ಯದಲ್ಲೇ ವಾಸಮಾಡಿದರು.


ಇಜ್ರೇಲ್, ಕೆಸುಲ್ಲೋತ್,


ಆಶೇರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 41,500:


ಆಗ ಲೇಯಳು, “ನಾನು ಧನ್ಯಳಾದೆ, ಮಹಿಳೆಯರು ನನ್ನನ್ನು ಧನ್ಯಳೆಂದು ಹೊಗಳುವರು,” ಎಂದುಕೊಂಡು ಆ ಮಗುವಿಗೆ ‘ಆಶೇರ್’ ಎಂದು ಹೆಸರಿಟ್ಟಳು.


ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.


(ಸೌಲನ ಮಗನಾದ ಈಷ್ಬೋಶೆತನಿಗೆ ಆಗ ನಾಲ್ವತ್ತು ವರ್ಷ. ಇಸ್ರಯೇಲರನ್ನು ಆತ ಎರಡು ವರ್ಷ ಆಳಿದನು).ಯೆಹೂದ್ಯರು ಮಾತ್ರ ದಾವೀದನನ್ನೇ ಹಿಂಬಾಲಿಸಿದರು.


ಸೌಲನ ಸೇನೆಗೂ ದಾವೀದನ ಸೇನೆಗೂ ಯುದ್ಧ ನಡೆಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಪ್ರಬಲನಾಗಿದ್ದನು.


ಸೌಲನ ಸಂಬಂಧಿಕರಾದ ಬೆನ್ಯಾಮೀನ್ ಗೋತ್ರದಿಂದ: 3,000 ಸೈನಿಕರು;


ಎಫ್ರಯಿಮ್ ಗೋತ್ರಗಳ ನಾಡಿನ ದಕ್ಷಿಣ ದಿಕ್ಕಿನ ಎಲ್ಲೆ ಆಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ತೊಡಗಿ ಮೇಲಿನ ಬೇತ್ ಹೋರೋನಿನ ಮೇಲೆ ಸಮುದ್ರ ತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ಉತ್ತರ ದಿಕ್ಕಿನ ಎಲ್ಲೆ ಮಿಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.


ಅದರ ಎಲ್ಲೆ ತಪ್ಪೊಹದಿಂದ ಪಶ್ಚಿಮ ಕಡೆಗೆ ಹೋಗುವ ಕಾನಾ ನದಿಯನ್ನು ಅನುಸರಿಸಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಯಿಮ್ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತು ಇದೇ.


ಇದಲ್ಲದೆ, ಎಫ್ರಯಿಮ್ ಕುಲದವರಿಗೆ ಮನಸ್ಸೆ ಕುಲದವರ ಮಧ್ಯೆ ಪ್ರತ್ಯೇಕವಾದ ಕೆಲವು ನಗರಗಳೂ ಅವಕ್ಕೆ ಸೇರಿದ ಗ್ರಾಮಗಳೂ ದೊರಕಿದವು.


ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.


ಚೀಟು ಮೊದಲು ಬೆನ್ಯಾಮೀನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸೊತ್ತು ಯೆಹೂದಾ ಮತ್ತು ಜೋಸೆಫ್ ವಂಶಸ್ಥರ ಪ್ರಾಂತ್ಯಗಳಿಗೆ ಮಧ್ಯೆಯಿದೆ.


ಜೋರ್ಡನ್ ನದಿಯೇ ಅವರ ಪೂರ್ವದಿಕ್ಕಿನ ಸರಹದ್ದು, ಬೆನ್ಯಾಮೀನ್ ಗೋತ್ರಗಳ ಸೊತ್ತಿನ ಸುತ್ತಣ ಎಲ್ಲೆ ಇದೇ.


ಎಫ್ರಯಿಮ್ ಗೋತ್ರದಿಂದ: 20,800 ಮಹಾರಣವೀರರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು