Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:1 - ಕನ್ನಡ ಸತ್ಯವೇದವು C.L. Bible (BSI)

1 ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:1
31 ತಿಳಿವುಗಳ ಹೋಲಿಕೆ  

ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.


ತಮ್ಮ ಮಾತನ್ನು ಅರಸನು ಲಕ್ಷಿಸಲಿಲ್ಲ ಎಂದು ತಿಳಿದು, ಇಸ್ರಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ, ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿ,” ಎಂದು ಪ್ರತಿಭಟಿಸಿ ತಮ್ಮ ತಮ್ಮ ನಿವಾಸಗಳಿಗೆ ಹೊರಟುಹೋದರು.


ಅಲ್ಲಿ ವಾಸವಾಗಿರುವ ಇಸ್ರಯೇಲರಲ್ಲಿ ಕೆಲವು ಮಂದಿ ದುಷ್ಟರು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಬಹುದು. ‘ಆ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಬಹುದು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಕೆಂಡಕ್ಕೆ ಇದ್ದಲುಬೇಕು, ಬೆಂಕಿಗೆ ಸೌದೆ ಬೇಕು; ವ್ಯಾಜ್ಯ ಕೆರಳಿಸಲು ಜಗಳಗಂಟಿ ಇರಲೇಬೇಕು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.


ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ,


ಅವನು ಗೂಢಚಾರನನ್ನು ಕಳುಹಿಸಿ ಇಸ್ರಯೇಲರ ಎಲ್ಲಾ ಕುಲದವರಿಗೆ, “ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾ‍ಲೋಮನು ಹೆಬ್ರೋನಿನಲ್ಲಿ ಅರಸ’ ಎಂದು ಘೋಷಿಸಿರಿ,” ಎಂದು ಹೇಳಿಸಿದ್ದನು.


ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಮಡದಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ,” ಎಂದರು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು.


“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.


ಬೆನ್ಯಾಮೀನನ ಮಕ್ಕಳು - ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದಾ.


ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.


ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಆಗ ಇಸ್ರಯೇಲರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಜೋರ್ಡನ್ ತಗ್ಗಿನಿಂದ ಜೆರುಸಲೇಮಿನವರೆಗೂ ಅವನ ಜೊತೆಯಲ್ಲೇ ಹೋದರು.


ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು