Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:10 - ಕನ್ನಡ ಸತ್ಯವೇದವು C.L. Bible (BSI)

10 ಅವನ ಕರುಳೆಲ್ಲಾ ಹೊರಗೆ ಬಂದುವು. ಎರಡನೆಯ ಸಾರಿ ಇರಿಯಬೇಕಾಗಿರಲಿಲ್ಲ; ಅಷ್ಟಕ್ಕೆ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನನ್ನು ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರುಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ; ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಮುಂದೆ ನಡೆದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:10
13 ತಿಳಿವುಗಳ ಹೋಲಿಕೆ  

ಆದರೂ ಅಸಾಹೇಲನು ಬಿಟ್ಟುಹೋಗುವುದಕ್ಕೆ ಒಪ್ಪಲಿಲ್ಲ. ಆದಕಾರಣ ಅಬ್ನೇರನು ಭರ್ಜಿಯನ್ನು ಹಿಮ್ಮುಖವಾಗಿ ಎಸೆದು ಅವನ ಹೊಟ್ಟೆಯನ್ನು ತಿವಿದನು. ಆ ಭರ್ಜಿ ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಆಗ ಏಹೂದನು ಎಡಗೈ ಚಾಚಿ, ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯನ್ನು ತಿವಿದನು.


ಸೌಲನೂ ಬೆನ್ಯಾಮೀನ್ ಗೋತ್ರಕ್ಕೆ ಸೇರಿದವನೇ. ದಾವೀದನನ್ನು ಹಿಂಬಾಲಿಸಿದವರು ಎಡಗೈಯಿಂದಾಗಲೀ ಬಲಗೈಯಿಂದಾಗಲೀ ಬಾಣಗಳನ್ನೆಸೆಯುವವರೂ ಕವಣೆಗಳಲ್ಲಿ ಕಲ್ಲುಗಳನ್ನಿಟ್ಟು ಎಸೆಯಲು ಶಕ್ತರೂ ಆಗಿದ್ದರು.


ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.


ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.


ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿ ಅವನ ಮೇಲೆ ಏನನ್ನಾದರೂ ಎಸೆಯುವುದರಿಂದಾಗಲಿ,


ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು