Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:14 - ಕನ್ನಡ ಸತ್ಯವೇದವು C.L. Bible (BSI)

14 ಶೆಬನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಅಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರೆಯವರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಶೆಬನು ಇಸ್ರಾಯೇಲ್‍ಪ್ರಾಂತಗಳಲ್ಲಿ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರಿಯರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಿಕ್ರೀಯ ಮಗನಾದ ಶೆಬನು ಇಸ್ರೇಲಿನ ಎಲ್ಲಾ ಕುಲಗಳ ಮೂಲಕ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಹೋದನು. ಬೇರಿಯ ಕುಲದವರೆಲ್ಲರೂ ಒಟ್ಟಿಗೆ ಸೇರಿಕೊಂಡು ಶೆಬನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:14
8 ತಿಳಿವುಗಳ ಹೋಲಿಕೆ  

ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು.


ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.


ಗಿಬ್ಯೋನ್, ರಾಮಾ, ಬೇರೋತ್,


ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.


ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಯೋವಾಬನನ್ನು ಹಿಂಬಾಲಿಸಿದರು.


ಯೋವಾಬನ ಕಡೆಯವರು ಅಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿದರು. ಅದರ ಹೊರಗೋಡೆಯ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯ ಕೆಳಗೆ ಅಗೆಯುತ್ತಾ ಅದನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.


ಮಾಕಾ ಊರಿನ ಅಹಸ್ಬೈ ಎಂಬುವನ ಮಗ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು