2 ಸಮುಯೇಲ 20:22 - ಕನ್ನಡ ಸತ್ಯವೇದವು C.L. Bible (BSI)22 ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ತುತೂರಿಯನ್ನು ಊದಿಸಿದನು; ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇವಿುನಲ್ಲಿದ್ದ ಅರಸನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು. ಅಧ್ಯಾಯವನ್ನು ನೋಡಿ |