Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:6 - ಕನ್ನಡ ಸತ್ಯವೇದವು C.L. Bible (BSI)

6 ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:6
17 ತಿಳಿವುಗಳ ಹೋಲಿಕೆ  

ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.


ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.


ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.


ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು . ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು .


ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು.


ಅದಕ್ಕೆ ಆ ವ್ಯಕ್ತಿ, “ನೀವು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಇಟ್ಟರೂ ಅರಸರ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸರು ನಮ್ಮೆಲ್ಲರಿಗೆ ಕೇಳಿಸುವಂತೆ ನಿಮಗೆ, ಅಬೀಷೈಗೆ ಹಾಗು ಇತ್ತೈಗೆ, ‘ಜಾಗರೂಕತೆಯಿಂದಿರಿ! ಆ ಯುವಕ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದರಲ್ಲವೇ?


ಅವನು ಸೈನ್ಯವನ್ನು ಮೂರು ಪಂಗಡಗಳಾಗಿ ವಿಭಾಗಿಸಿ ಒಂದು ಪಂಗಡವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನೂ ನಿಮ್ಮ ಸಂಗಡ ಬರುತ್ತೇನೆ,” ಎಂದು ಹೇಳಿದನು.


ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು ಜೆರುಸಲೇಮಿಗೆ ಹೋದನು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು