Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:9 - ಕನ್ನಡ ಸತ್ಯವೇದವು C.L. Bible (BSI)

9 ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಅಮಾಸನನ್ನು - ಸಹೋದರನೇ, ಕ್ಷೇಮವೋ ಎಂದು ಕೇಳಿ ಮುದ್ದಿಡುವದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು. ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:9
14 ತಿಳಿವುಗಳ ಹೋಲಿಕೆ  

ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಯಾವನಾದರು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವನನ್ನು ಕೂಡಲೆ ಕೈಚಾಚಿ ಅವನನ್ನು ಎತ್ತಿ ಮುದ್ದಿಡುತ್ತಿದ್ದನು.


ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.


ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ಕೆಟ್ಟ ಹೃದಯದಿಂದ ಸವಿನುಡಿಯು ತುಟಿ, ಬೆಳ್ಳಿ ಮೆರುಗಿನಿಂದ ಥಳಿಸುವ ಮಣ್ಣಿನ ಬೋಕಿ.


ಮಿತ್ರನು ಕೊಡುವ ಗುದ್ದು ಹಿತಕರ; ಶತ್ರುವು ಕೊಡುವ ಮುದ್ದು ಮೋಸಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು