Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:1 - ಕನ್ನಡ ಸತ್ಯವೇದವು C.L. Bible (BSI)

1 ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:1
34 ತಿಳಿವುಗಳ ಹೋಲಿಕೆ  

ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.


ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.


ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.


ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.


ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೇ? ಕೆಯೀಲಾ ಪುರಜನರು ನನ್ನನ್ನು ಅವನ ಕೈಗೆ ಒಪ್ಪಿಸುವರೇ? ಇಸ್ರಯೇಲ ದೇವರಾದ ಸರ್ವೇಶ್ವರಾ, ಈ ವಿಷಯದಲ್ಲಿ ಉತ್ತರ ದಯಪಾಲಿಸಿ,” ಎಂದು ಪ್ರಾರ್ಥಿಸಿದನು. ಸೌಲನು ಬರುವನೆಂಬುದಾಗಿ ಸರ್ವೇಶ್ವರನಿಂದ ಉತ್ತರ ಸಿಕ್ಕಿತು.


ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.


ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.


ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ಬರವು ಕಾನಾನಿನಲ್ಲಿ ಘೋರವಾಗಿತ್ತು.


ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು. ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು.


ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.


ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.


ಯಾಯೀರಿನವನಾದ ಈರನೂ ದಾವೀದನ ಯಾಜಕನು.


ಅವರು, “ನಮ್ಮನ್ನು ಇಸ್ರಯೇಲ್ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸಿ.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ನಾವು ಇಟ್ಟ ಅಪ್ಪಣೆಯ ನಿಮಿತ್ತ ದೇವರ ಕೋಪ ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದ ಉಳಿಸಬೇಕು. ನಾವು ಹೀಗೆ ಮಾಡೋಣ: ಅವರನ್ನು ಬದುಕಲು ಬಿಟ್ಟುಬಿಡಿ.


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು