Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:11 - ಕನ್ನಡ ಸತ್ಯವೇದವು C.L. Bible (BSI)

11 ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವನ್ನು ದಾವೀದನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ತಿಳಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡುತ್ತಿರುವುದನ್ನು ಜನರು ದಾವೀದನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:11
4 ತಿಳಿವುಗಳ ಹೋಲಿಕೆ  

ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿ ದಾವೀದನಿಗೆ ತಿಳಿಯಿತು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು