Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:15 - ಕನ್ನಡ ಸತ್ಯವೇದವು C.L. Bible (BSI)

15 ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಮತ್ತೆ ಯುದ್ಧ ನಡೆಯಿತು. ದಾವೀದನು ತನ್ನ ಸೈನಿಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ತಿರಿಗಿ ಯುದ್ಧವಾಯಿತು. ದಾವೀದನು ತನ್ನ ಸೈನಿಕರನ್ನು ಕರಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಂಥ ಅವನನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಫಿಲಿಷ್ಟಿಯರು ದಾವೀದನೊಡನೆ ಮತ್ತೆ ಯುದ್ಧವನ್ನು ಮಾಡಿದರು. ದಾವೀದನು ತನ್ನ ಜನರೊಂದಿಗೆ ಫಿಲಿಷ್ಟಿಯರ ವಿರುದ್ಧ ಹೋರಾಡಲು ಹೋದನು. ಆದರೆ ದಾವೀದನು ಆಯಾಸಗೊಂಡು ಬಲಹೀನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಫಿಲಿಷ್ಟಿಯರು ತಿರುಗಿ ಇಸ್ರಾಯೇಲರ ಮೇಲೆ ಯುದ್ಧಮಾಡಿದರು. ಆಗ ದಾವೀದನು ತನ್ನ ಜನರೊಂದಿಗೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿದನು. ದಾವೀದನು ದಣಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:15
14 ತಿಳಿವುಗಳ ಹೋಲಿಕೆ  

ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು.


ವೃದ್ಧಾಪ್ಯದಲಿ ನನ್ನ ತಳ್ಳಿಬಿಡಬೇಡಯ್ಯಾ I ಶಕ್ತಿ ಕುಂದುತ್ತಿರುವಾಗ ಕೈಬಿಡಬೇಡಯ್ಯಾ II


ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು.


ದಾವೀದನು ಸರ್ವೇಶ್ವರನ ಆಜ್ಞಾನುಸಾರ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜರಿನವರೆಗೂ ಹೊಡೆದು ಓಡಿಸಿದನು.


ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.


ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.


ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು