Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:17 - ಕನ್ನಡ ಸತ್ಯವೇದವು C.L. Bible (BSI)

17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:17
14 ತಿಳಿವುಗಳ ಹೋಲಿಕೆ  

ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.


ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಹೇ ಸರ್ವೇಶ್ವರಾ, ನೀನೆನಗೆ ಜ್ಯೋತಿ ಕತ್ತಲನು ನೀಗಿಸಿ, ಬೆಳಕನು ನೀಡುತಿ.


ನನ್ನ ಮೇಲೆರಗಿದ್ದರಾ ಹಗೆಗಳು ದುರಂತ ಕಾಲದಲಿ ನನಗುದ್ಧಾರಕನಾದ ಸರ್ವೇಶ್ವರನು, ಆ ವಿಪತ್ಕಾಲದಲಿ.


ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.


ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕೊಲ್ಲಲು ಅಪ್ಪಣೆಯಾಗಬೇಕು. ಇದು ನಿಮ್ಮ ಅಪ್ಪಣೆಯೆಂದು ಯಾರಿಗೂ ತಿಳಿದುಬರುವುದಿಲ್ಲ. ಅವನು ನಿಮ್ಮನ್ನು ಕೊಂದರೆ ನಿಮ್ಮ ಆಶ್ರಯದ ಯೆಹೂದ್ಯರೆಲ್ಲರು ದಿಕ್ಕಾಪಾಲಾಗಿ ಜುದೇಯದ ಶೇಷವೂ ನಿಶ್ಶೇಷವಾಗುವುದು. ಹೀಗೆ ಆಗುವುದು ಸರಿಯೇ?” ಎಂದು ಗುಟ್ಟಾಗಿ ವಿನಂತಿಸಿದನು.


ಅವನು ಸೈನ್ಯವನ್ನು ಮೂರು ಪಂಗಡಗಳಾಗಿ ವಿಭಾಗಿಸಿ ಒಂದು ಪಂಗಡವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನೂ ನಿಮ್ಮ ಸಂಗಡ ಬರುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು