Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:19 - ಕನ್ನಡ ಸತ್ಯವೇದವು C.L. Bible (BSI)

19 ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೆತ್ಲೆಹೇಮಿನವನಾದ ಯಾರೇಯೋ ರೆಗೀಮ್ ಎಂಬವನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಭರ್ಜಿಯ ಹಿಡಿಕೆ ನೇಯಿಗಾರರ ಕುಂಟೆಯಷ್ಟು ಗಾತ್ರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇವಿುನವನಾದ ಯಾರೇ ಯೋರೆಗೀಮ್ ಎಂಬವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಗೋಬ್ ಎಂಬ ಸ್ಥಳದಲ್ಲಿ ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಆರಂಭವಾಯಿತು. ಯಾರೇಯೋರೆಗೀವ್ ಎಂಬವನು ಬೆನ್ಯಾಮೀನ್ ಕುಲದವನೂ ಬೆತ್ಲೆಹೇಮಿನವನೂ ಆಗಿದ್ದನು. ಇವನ ಮಗನಾದ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಭರ್ಜಿಯು ನೇಕಾರನ ಕುಂಟೆಯಷ್ಟು ಗಾತ್ರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅನಂತರ ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಯುದ್ಧ ಉಂಟಾದಾಗ, ಬೇತ್ಲೆಹೇಮಿನವನಾದ ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರರನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:19
5 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮ ಲಹ್ಮೀಯನನ್ನು ಕೊಂದನು. ಈ ಲಹ್ಮೀಯನ ಬರ್ಜಿಯ ಹಿಡಿಕೆ ನೇಕಾರರ ಕುಂಟೆಯಷ್ಟು ದೊಡ್ಡದಾಗಿತ್ತು.


ಪ್ರಖ್ಯಾತರಾದ ಇನ್ನಿತರ ಸೈನಿಕರು: ಯೋವಾಬನ ತಮ್ಮ ಅಸಾಹೇಲ, ಬೆತ್ಲೆಹೇಮಿನ ದೋದೋವಿನ ಮಗ ಎಲ್ಖಾನಾನ್,


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಆ ಮೂವತ್ತು ಮಂದಿ ರಣವೀರರ ಪಟ್ಟಿ ಇದು: ಯೋವಾಬನ ತಮ್ಮನಾದ ಅಸಾಹೇಲನು, ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು