Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:9 - ಕನ್ನಡ ಸತ್ಯವೇದವು C.L. Bible (BSI)

9 ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:9
13 ತಿಳಿವುಗಳ ಹೋಲಿಕೆ  

ಹೀಗೆ ನವೊಮಿ ತನ್ನ ಮೋವಾಬ್ಯ ಸೊಸೆಯಾದ ರೂತಳ ಸಂಗಡ ಬೆತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿ ಪ್ರಾರಂಭವಾಗಿತ್ತು


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.


ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವವಾದವು. ಏಕೆಂದರೆ ಜವೆಗೋದಿ ತೆನೆಬಿಟ್ಟಿತ್ತು, ಅಗಸೆ ಮೊಗ್ಗು ಕಚ್ಚಿತ್ತು.


ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.


ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.


“ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು