Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:14 - ಕನ್ನಡ ಸತ್ಯವೇದವು C.L. Bible (BSI)

14 ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ ಮೊಳಗಿತು ವಾಣಿ ಆ ಪರಮೋನ್ನತನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಆಕಾಶದಿಂದ ಗುಡುಗಿದನು; ಪರಾತ್ಪರನು ಧ್ವನಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಆಕಾಶದಿಂದ ಗುಡುಗಿದನು! ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು. ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:14
12 ತಿಳಿವುಗಳ ಹೋಲಿಕೆ  

ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.


ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ.


ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು