Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:2 - ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನೇ ನನಗೆ ಪೊರೆಬಂಡೆ, ನನ್ನ ಕಲ್ಲು ಕೋಟೆ, ಆತನೇ ವಿಮೋಚಕ ನನಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಹೇಳಿದನು: “ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:2
15 ತಿಳಿವುಗಳ ಹೋಲಿಕೆ  

ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II


ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ I ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ II


ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II


ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ಸಮಾಚಾರ ದಾವೀದನಿಗೆ ಸಿಕ್ಕಿತು. ಅವನು ಮಾವೋನಿನಲ್ಲಿ ಇರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ್ ಮರುಭೂಮಿಗೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.


ಆಗ ಅವನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವುದಕ್ಕಾಗಿ ಹೊರಟನು.


ಸರ್ವೇಶ್ವರನಲ್ಲದೆ ಇನ್ನಾವ ದೇವರುಂಟು? ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು?


ದೇವನೇ ನನಗೆ ಭದ್ರವಾದ ದುರ್ಗ ಆತನಿಂದಲೇ ಸರಾಗ ನನ್ನ ಮಾರ್ಗ.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು