Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:23 - ಕನ್ನಡ ಸತ್ಯವೇದವು C.L. Bible (BSI)

23 ಆತನ ವಿಧಿನಿಯಮಗಳನ್ನು ಕೈಬಿಡದೆ ಆತನಾಜ್ಞೆಗಳನಿಟ್ಟೆ ಸದಾ ನನ್ನ ಕಣ್ಣ ಮುಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳಿಂದ ತೊಲಗಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಯೆಹೋವನ ಆಜ್ಞೆಗಳನ್ನು ಯಾವಾಗಲೂ ಜ್ಞಾಪಿಸಿಕೊಂಡೆನು. ನಾನು ಯಾವಾಗಲೂ ಆತನ ಕಟ್ಟಳೆಗನುಸಾರವಾಗಿಯೇ ನಡೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ದೇವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:23
14 ತಿಳಿವುಗಳ ಹೋಲಿಕೆ  

ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ I ನೀನೇ ನನಗದರ ಬೋಧನೆ ಮಾಡಿದ್ದರಿಂದ II


ಆರಿಸಿಕೊಂಡಿರುವೆನು ನಾನು ಸತ್ಯಮಾರ್ಗವನು I ಇರಿಸಿಕೊಂಡಿಹೆನು ಕಣ್ಮುಂದೆ ನಿನ್ನ ವಿಧಿಗಳನು II


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.


“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು