Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:24 - ಕನ್ನಡ ಸತ್ಯವೇದವು C.L. Bible (BSI)

24 ಪಾಪದಲಿ ಬೀಳದೆ ನಡೆದೆ ಎಚ್ಚರಿಕೆಯಾಗಿ ಆತನ ದೃಷ್ಟಿಯಲಿದ್ದೆ ನಿರ್ದೋಷಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು, ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:24
14 ತಿಳಿವುಗಳ ಹೋಲಿಕೆ  

ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.


ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.


ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು