Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:29 - ಕನ್ನಡ ಸತ್ಯವೇದವು C.L. Bible (BSI)

29 ಹೇ ಸರ್ವೇಶ್ವರಾ, ನೀನೆನಗೆ ಜ್ಯೋತಿ ಕತ್ತಲನು ನೀಗಿಸಿ, ಬೆಳಕನು ನೀಡುತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನೇ, ನನ್ನ ದೀಪವು ನೀನೇ; ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರೇ, ನನ್ನ ದೀಪವು ನೀವೇ; ಯೆಹೋವ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:29
16 ತಿಳಿವುಗಳ ಹೋಲಿಕೆ  

ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು