Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:31 - ಕನ್ನಡ ಸತ್ಯವೇದವು C.L. Bible (BSI)

31 ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರ ಶಕ್ತಿಯು ಪರಿಪೂರ್ಣವಾದದ್ದು. ಯೆಹೋವನ ಮಾತು ಪರೀಕ್ಷಿಸಲ್ಪಟ್ಟದ್ದು; ಆತನು ತನ್ನಲ್ಲಿ ಭರವಸೆಯಿಟ್ಟವರನ್ನು ಸಂರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:31
18 ತಿಳಿವುಗಳ ಹೋಲಿಕೆ  

“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;


ದೇವರ ಮಾರ್ಗ ದೋಷರಹಿತ I ಸರ್ವೇಶ್ವರನ ವಚನ ಪರಮಪುನೀತ I ಆಶ್ರಿತರೆಲ್ಲರಿಗಾತ ರಕ್ಷಣಾಕವಚ II


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.


ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II


ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II


ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.


ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು