Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:34 - ಕನ್ನಡ ಸತ್ಯವೇದವು C.L. Bible (BSI)

34 ನನಗಿತ್ತನಾತ ಹುಲ್ಲೆಯಂಥ ಮೊನೆಗಾಲು ಎನ್ನ ಬಿಗಿನಿಲ್ಲಿಸಿದ ಮಲೆಗಳ ಮೇಲೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಾನು ಉನ್ನತ ಪ್ರದೇಶಗಳಲ್ಲಿ ನಿಲ್ಲುವಂತೆ ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:34
7 ತಿಳಿವುಗಳ ಹೋಲಿಕೆ  

ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.


ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”


ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು