Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:37 - ಕನ್ನಡ ಸತ್ಯವೇದವು C.L. Bible (BSI)

37 ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದರಿಂದ ನನ್ನ ಹರಡುಗಳು ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:37
8 ತಿಳಿವುಗಳ ಹೋಲಿಕೆ  

ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು, ನೀ ಓಡುವಾಗ ಮುಗ್ಗರಿಸಿ ಬೀಳಲಾಗದು.


ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II


ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II


ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ I ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ II


ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II


ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ ಅಕ್ಕರೆಯಿಂದ ಮೆಚ್ಚಿ ನನಗಾದನು ರಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು