Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:48 - ಕನ್ನಡ ಸತ್ಯವೇದವು C.L. Bible (BSI)

48 ನನ್ನ ಶತ್ರುಗಳಿಗೆ ವಿಧಿಸುವನಾ ದೇವ ಪ್ರತಿದಂಡನೆ ಜನಾಂಗಗಳನು ಅಧೀನಪಡಿಸುವನಾತ ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:48
11 ತಿಳಿವುಗಳ ಹೋಲಿಕೆ  

ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II


ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.


ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ಸರ್ವೇಶ್ವರ ನನ್ನ ಒಡೆಯರಾದ ನಿಮಗೆ ವಾಗ್ದಾನಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ, ನಿಮ್ಮನ್ನು ಇಸ್ರಯೇಲಿನ ಅರಸರನ್ನಾಗಿ ಮಾಡಲಿ.


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು