Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:49 - ಕನ್ನಡ ಸತ್ಯವೇದವು C.L. Bible (BSI)

49 ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ ಎದುರಾಳಿಗೆ ತಪ್ಪಿಸಿ ನನ್ನನುನ್ನತಿಗೇರಿಸಿದೆ ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಶತ್ರುಗಳಿಂದ ನನ್ನನ್ನು ಬಿಡುಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:49
11 ತಿಳಿವುಗಳ ಹೋಲಿಕೆ  

ಬಿಡಿಸೆನ್ನನು ಪ್ರಭು ಕೆಡುಕರಿಂದ I ಕಾಪಾಡೆನ್ನನು ಹಿಂಸಕರಿಂದ II


ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ I ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ I ನಾನೆಡವುದನೇ ನಿರೀಕ್ಷಿಸುವವರಿಂದ II


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II


ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಅಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ ಅಭಿವೃದ್ಧಿಯಾಗುತ್ತಿದೆ ಅವರ ರಾಜ್ಯ.


ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II


ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು