Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:51 - ಕನ್ನಡ ಸತ್ಯವೇದವು C.L. Bible (BSI)

51 ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 “ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ, ದಾವೀದನಿಗೂ, ಅವನ ಸಂತತಿಯವರಿಗೂ ದಯೆಯನ್ನು ಯುಗಯುಗಕ್ಕೂ ಅನುಗ್ರಹಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:51
18 ತಿಳಿವುಗಳ ಹೋಲಿಕೆ  

ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II


“ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II


ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II


ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಸರ್ವೇಶ್ವರನೇ ನನಗೆ ಪೊರೆಬಂಡೆ, ನನ್ನ ಕಲ್ಲು ಕೋಟೆ, ಆತನೇ ವಿಮೋಚಕ ನನಗೆ


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು