2 ಸಮುಯೇಲ 22:7 - ಕನ್ನಡ ಸತ್ಯವೇದವು C.L. Bible (BSI)7 ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ದೇವನಿಗೆ ಪ್ರಾರ್ಥನೆ ಮಾಡಿದೆ ಆ ಸರ್ವೇಶ್ವರನಿಗೆ. ನನ್ನ ಕೂಗು ಕೇಳಿಸಿತು ಆತನ ಮಂದಿರದಲಿ ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ಅವುಗಳಲ್ಲಿ ಸಿಲುಕಿಕೊಂಡಿದ್ದಾಗ ಯೆಹೋವನಿಗೆ ಪ್ರಾರ್ಥಿಸಿದೆನು. ಹೌದು, ನನ್ನ ದೇವರಿಗೆ ನಾನು ಮೊರೆಯಿಟ್ಟೆನು; ತನ್ನ ಆಲಯದಲ್ಲಿದ್ದ ಆತನಿಗೆ ನನ್ನ ಸ್ವರ ಕೇಳಿಸಿತು; ಸಹಾಯಕ್ಕಾಗಿ ನಾನಿಟ್ಟ ಮೊರೆಗೆ ಆತನು ಕಿವಿಗೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿ |