Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:12 - ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾ ಜಯವನ್ನುಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಶಮ್ಮನು ಹೊಲದ ಮಧ್ಯಭಾಗದಲ್ಲಿ ನಿಂತು ಅದನ್ನು ಉಳಿಸಿಕೊಂಡನು. ಅವನು ಫಿಲಿಷ್ಟಿಯರನ್ನು ಕೊಂದನು. ಆ ಸಮಯದಲ್ಲಿ ಯೆಹೋವನು ಮಹಾವಿಜಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:12
5 ತಿಳಿವುಗಳ ಹೋಲಿಕೆ  

ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.


ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.


ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II


ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II


ಈತ ಪಸ್ದಮ್ಮೀಮಿ ಎಂಬಲ್ಲಿ ಫಿಲಿಷ್ಟಿಯರಿಗೆ ವಿರುದ್ಧ ಹೂಡಿದ ಕಾಳಗದಲ್ಲಿ ದಾವೀದನ ಪರವಾಗಿ ಹೋರಾಡಿದನು. ಇಸ್ರಯೇಲರು ಹಿಂಜರಿದು ಓಡಿಹೋಗುತ್ತಿದ್ದಾಗ ಇವನು ಜವೆಗೋದಿಯ ಹೊಲದಲ್ಲಿ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು