Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:15 - ಕನ್ನಡ ಸತ್ಯವೇದವು C.L. Bible (BSI)

15 ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ, “ಬೆತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ - ಬೇತ್ಲೆಹೇಮ್ ಊರಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವದಾದರೆ ಎಷ್ಟೋ ಒಳ್ಳೇದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಅತಿಯಾಸೆಯಾಯಿತು. ದಾವೀದನು, “ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:15
12 ತಿಳಿವುಗಳ ಹೋಲಿಕೆ  

ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ದಾವೀದನು ತನ್ನೂರನ್ನು ಜ್ಞಾಪಿಸಿಕೊಂಡು ಅಸ್ವಸ್ಥನಾಗಿ ‘ಬೆತ್ಲೆಹೇಮಿನ ದ್ವಾರದ ಬಳಿಯಿರುವ ಬಾವಿಯಿಂದ ನನಗೆ ಕುಡಿಯಲು ಯಾರಾದರೂ ನೀರನ್ನು ತಂದುಕೊಡಬಲ್ಲಿರೋ!’ ಎಂದು ತನ್ನ ಅಪೇಕ್ಷೆಯನ್ನು ವ್ಯಕ್ತಪಡಿಸಿದನು.


ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.


ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು