Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:19 - ಕನ್ನಡ ಸತ್ಯವೇದವು C.L. Bible (BSI)

19 ಇವರಲ್ಲಿ ಘನತೆ ಗೌರವ ಪಡೆದ ನಾಯಕ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರಲ್ಲಿ ಘನವುಳ್ಳವನೂ ನಾಯಕನೂ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:19
9 ತಿಳಿವುಗಳ ಹೋಲಿಕೆ  

ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.


ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.


ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.


ಇವನು ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾಗಿದ್ದನೇ ಹೊರತು, ‘ಮೂವರು ಪ್ರಮುಖ ವೀರರ’ ಪಡೆಯವರಷ್ಟು ಪ್ರಖ್ಯಾತನಾಗಲಿಲ್ಲ. ಅವನನ್ನು ದಾವೀದನು ತನ್ನ ಕಾವಲುಗಾರರಲ್ಲಿ ಮುಖ್ಯಸ್ಥನನ್ನಾಗಿ ಇಟ್ಟುಕೊಂಡಿದ್ದನು.


ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.


ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ


ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.


ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು