Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:3 - ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:3
27 ತಿಳಿವುಗಳ ಹೋಲಿಕೆ  

ಸರ್ವೇಶ್ವರನಲ್ಲದೆ ಇನ್ನಾವ ದೇವರುಂಟು? ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು?


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.


ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ?


ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು