Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:8 - ಕನ್ನಡ ಸತ್ಯವೇದವು C.L. Bible (BSI)

8 ದಾವೀದನ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾವೀದನ ರಣವೀರರ ಪಟ್ಟಿ - ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ: ಮೂರು ಜನ ಮುಖ್ಯಸ್ಥರಲ್ಲಿ ಒಬ್ಬನು ತಹ್ಕೆಮೋನ್ಯನಾದ ಯೋಷೆಬ್ ಬಷ್ಷೆಬೆತ ಎಂಬವನು; ಇವನು ತನ್ನ ಈಟಿಯಿಂದ ಎಂಟುನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:8
8 ತಿಳಿವುಗಳ ಹೋಲಿಕೆ  

ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕ.


ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯಾಗಿದ್ದನು; ಹಕ್ಮೋನಿಯ ಮಗ ಯೆಹೀಯೇಲನು ರಾಜಪುತ್ರ ಪಾಲಕನಾಗಿದ್ದನು.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:


ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು,


ಈ ಸುದ್ದಿ ದಾವೀದನಿಗೆ ಮುಟ್ಟಿತು.ಅವನು ಯೋವಾಬನನ್ನೂ ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.


ಇಸ್ರಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿವಿಧ ಸೇವೆಯನ್ನು ಮಾಡಬೇಕಾಗಿದ್ದ ವರ್ಗಗಳ ಅಧಿಪತಿಗಳು ಹಾಗು ಇವರ ಕಾರ್ಯಕ್ರಮಗಳ ಪಟ್ಟಿ: ವರ್ಷದ ಎಲ್ಲಾ ತಿಂಗಳುಗಳಲ್ಲಿ, ತಿಂಗಳಿಗೆ ಒಂದು ವರ್ಗದಂತೆ, ಸರದಿಯ ಮೇಲೆ ಕೆಲಸಕ್ಕಾಗಿ ಬರುತ್ತಿದ್ದ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು