Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:9 - ಕನ್ನಡ ಸತ್ಯವೇದವು C.L. Bible (BSI)

9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನು ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:9
12 ತಿಳಿವುಗಳ ಹೋಲಿಕೆ  

ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕ; ಆ ವರ್ಗದಲ್ಲಿ ಮಿಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನ ಮಾಡಿದರು.


ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು.


ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು