Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:10 - ಕನ್ನಡ ಸತ್ಯವೇದವು C.L. Bible (BSI)

10 ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನು ಜನರನ್ನು ಲೆಕ್ಕಹಾಕಿದ ನಂತರ ಅವಮಾನಗೊಂಡಂತೆ ಭಾವಿಸಿದನು. ದಾವೀದನು ಯೆಹೋವನಿಗೆ, “ನಾನು ಈ ಕಾರ್ಯವನ್ನು ಮಾಡಿ ಮಹಾಪಾಪಕ್ಕೆ ಒಳಗಾದೆನು! ಯೆಹೋವನೇ, ನನ್ನ ಪಾಪಕ್ಕಾಗಿ ನನ್ನನ್ನು ಕ್ಷಮಿಸೆಂದು ಬೇಡುತ್ತೇನೆ. ನಾನು ಬಹಳ ಮೂರ್ಖನಾಗಿಬಿಟ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:10
27 ತಿಳಿವುಗಳ ಹೋಲಿಕೆ  

ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಅನಂತರದಲ್ಲೇ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು..


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ.


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


“ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕೂಡಲೆ ಕರೆಯಿಸಿ, “ನಾನು ನಿಮ್ಮ ದೇವರಾದ ಸರ್ವೇಶ್ವರನಿಗೂ ನಿಮಗೂ ದ್ರೋಹಮಾಡಿದ್ದೇನೆ.


ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.


ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು