Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:2 - ಕನ್ನಡ ಸತ್ಯವೇದವು C.L. Bible (BSI)

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಧಿಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದ ವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಜನಗಣತಿ ಮಾಡಿಕೊಂಡು ಬಾ” ಎಂದು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ - ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಾಯೇಲ್‍ಕುಲಗಳ ಎಲ್ಲಾ ಜನರನ್ನು ಲೆಕ್ಕಮಾಡಿಕೊಂಡು ಬಾ ಎಂದು ಅವನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜನಾದ ದಾವೀದನು ಸೈನ್ಯದ ಸೇನಾಧಿಪತಿಯಾದ ಯೋವಾಬನಿಗೆ, “ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಸಂಚರಿಸಿ ಜನರನ್ನು ಲೆಕ್ಕಹಾಕಿರಿ. ಆಗ ಅಲ್ಲಿ ಎಷ್ಟು ಜನರಿದ್ದಾರೆಂಬುದು ನನಗೆ ತಿಳಿಯುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:2
16 ತಿಳಿವುಗಳ ಹೋಲಿಕೆ  

ಆ ವಾಗ್ದಾನವನ್ನು ನಾನು ನೆರವೇರಿಸದೆ ಹೋದರೆ ಅವರು ನನಗೆ ಏನುಬೇಕಾದರೂ ಮಾಡಲಿ,” ಎಂದನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ.


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಯೇಲರನ್ನು ಲೆಕ್ಕಮಾಡಿಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು.


ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,


ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಚೆರೂಯಳ ಮಗ ಯೋವಾಬನು ಅವನ ಸೇನಾಪತಿ ಆಗಿದ್ದನು. ಅಹೀಲೂದನ ಮಗ ಯೆಹೋಷಾಫಟನು ಅವನ ಮಂತ್ರಿ ಆಗಿದ್ದನು.


ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು