Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೋವಾಬನು ಅರಸನಿಗೆ, “ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೋವಾಬನು ಅರಸನಿಗೆ - ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಗಳನ್ನು ಈಗ ಇರುವದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:3
7 ತಿಳಿವುಗಳ ಹೋಲಿಕೆ  

ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮ್ಮನ್ನು ಹೆಚ್ಚಿಸಲಿ; ಅವರೇ ವಾಗ್ದಾನಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ;


ವೃದ್ಧಿಗೊಳಿಸಲಿ ಪ್ರಭುವು ನಿಮ್ಮನು I ವೃದ್ಧಿಗೊಳಿಸಲಿ ನಿಮ್ಮ ಮಕ್ಕಳನು II


ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.


ಪ್ರಜೆಗಳ ಬಹುಸಂಖ್ಯೆ ಅರಸನಿಗೆ ಅತಿ ಹಿರಿಮೆ; ಪ್ರಜೆಗಳ ಕೊರತೆ ರಾಜಕುವರನಿಗೂ ಅಂಜಿಕೆ.


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವರು ಇಸ್ರಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು