Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:4 - ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವರು ಇಸ್ರಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದದರಿಂದ ಅವರು ಇಸ್ರಾಯೇಲ್ಯರನ್ನು ಲೆಕ್ಕಿಸುವದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ರಾಜನಾದ ದಾವೀದನು ಯೋವಾಬನಿಗೆ ಮತ್ತು ಸೈನ್ಯದ ಸೇನಾಪತಿಗಳಿಗೆ ಜನರನ್ನು ಲೆಕ್ಕಹಾಕಲು ಆಜ್ಞಾಪಿಸಿದನು. ಆದ್ದರಿಂದ ಯೋವಾಬನು ಸೈನ್ಯದ ಸೇನಾಪತಿಗಳೊಡನೆ ಇಸ್ರೇಲಿನ ಜನರನ್ನು ಲೆಕ್ಕಹಾಕಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:4
7 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.


ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?


ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವನು ಹೊರಟುಹೋಗಿ ಇಸ್ರಯೇಲರ ಪ್ರಾಂತ್ಯಗಳಲ್ಲೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿದನು.


ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.


ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.


ಅವರು ಜೋರ್ಡನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ,


“ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು