Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:7 - ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್‍ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ತೂರ್ ಕೋಟೆಗೂ ಹಿವ್ವಿಯರ ಮತ್ತು ಕಾನಾನ್ಯರ ಎಲ್ಲಾ ನಗರಗಳಿಗೂ ಯೆಹೂದದ ದಕ್ಷಿಣಕ್ಕಿರುವ ಬೇರ್ಷೆಬಕ್ಕೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:7
10 ತಿಳಿವುಗಳ ಹೋಲಿಕೆ  

ಅಲ್ಲಿಂದ ಅದು ತಿರುಗಿಕೊಂಡು ರಾಮಾ, ಟೈರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರತೀರದಲ್ಲಿ ಕೊನೆಗೊಳ್ಳುತ್ತದೆ.


ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.


ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.


ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.


ಹೀಗೆ ಒಂಬತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ನಾಡನ್ನೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿ ಬಂದರು.


ಟೈರ್ ಪಟ್ಟಣವು ತನ್ನ ಸುತ್ತಲೂ ಗೋಡೆಯನ್ನು ಕಟ್ಟಿಕೊಂಡಿದೆ. ಬೆಳ್ಳಿಯನ್ನು ಮಣ್ಣುಮಸಿಯಂತೆ, ಬಂಗಾರವನ್ನು ಕಡ್ಡಿಕಸದಂತೆ ರಾಶಿಮಾಡಿಟ್ಟುಕೊಂಡಿದೆ.


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.


ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಸಿದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು