Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:10 - ಕನ್ನಡ ಸತ್ಯವೇದವು C.L. Bible (BSI)

10 ಆ ವಾಗ್ದಾನವನ್ನು ನಾನು ನೆರವೇರಿಸದೆ ಹೋದರೆ ಅವರು ನನಗೆ ಏನುಬೇಕಾದರೂ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆಹೋದರೆ ಆತನು ನನಗೆ ಬೇಕಾದದ್ದನ್ನು ಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:10
9 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.


ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.


ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಯೇಲರನ್ನೆಲ್ಲಾ ಕೂಡಿಸಿ ನನ್ನ ಒಡೆಯರಾದ ಅರಸರ ಬಳಿಗೆ ಕರೆದುಕೊಂಡು ಬರುವೆನು; ಅವರು ನಿಮ್ಮ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನ ಮಾಡಬಹುದು,” ಎಂದು ಹೇಳಿದನು. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.


ಅವರು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾರೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು